ಬೆಂಗಳೂರು : ಸಚಿವ ಜಮೀರ್ ಅಹಮದ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ 7 ಮನೆ, ಕೊಡಗಿನಲ್ಲಿ 2 ಕಾಫಿ ಎಸ್ಟೇಟ್ ಸೇರಿದಂತೆ 10 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಹಲಸೂರು ನಿವಾಸ ಸೇರಿ 10 ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 50 ಕ್ಕೂ ಹೆಚ್ಚು ಅಧಿಕಾರಿಗಳು ಇಂದು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

