ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. 15 ಸಾವಿರ ರೂ. ಲಂಚ ಸ್ವೀಕರಿಸುವಾಗ ಚನ್ನಪಟ್ಟಣ ಎಪಿಎಂಸಿ ಕಾರ್ಯದರ್ಶಿ ಶಶಿಕಲಾ, ಎಪಿಎಂಸಿ ಸೆಕ್ಯೂರಿಟಿ ಗಾರ್ಡ್ ಕೃಷ್ಣಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಾವಿನ ಮಂಡಿಗೆ ಲೈಸೆನ್ಸ್ ನೀಡಲು 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದರು. ರೆಹಮತ್ ಅಲಿ ಎಂಬುವರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಲಂಚದ ಹಣದ ಸಹಿತ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.