HomeKarnatakaBREAKING : ಲಾಂಗ್ ಹಿಡಿದು ರೀಲ್ಸ್ : ಜೈಲಿನಿಂದ ಮಾಜಿ ಬಿಗ್ ಬಾಸ್ ಸ್ಪರ್ಧಿ ವಿನಯ್...

BREAKING : ಲಾಂಗ್ ಹಿಡಿದು ರೀಲ್ಸ್ : ಜೈಲಿನಿಂದ ಮಾಜಿ ಬಿಗ್ ಬಾಸ್ ಸ್ಪರ್ಧಿ ವಿನಯ್ ಗೌಡ, ರಜತ್ ರಿಲೀಸ್.!

ಬೆಂಗಳೂರು: ಲಾಂಗ್ ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಹಾಗೂ ರಜತ್ ಇಬ್ಬರಿಗೆ ಕೋರ್ಟ್ ನಿನ್ನೆ ಜಾಮೀನು ಮಂಜೂರು ಮಾಡಿದ್ದು, ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ವಿನಯ್ ಗೌಡ ಹಾಗೂ ರಜತ್ ಇಂದು ರಿಲೀಸ್ ಆಗಿ ಹೊರ ಬಂದಿದ್ದಾರೆ.
ಲಾಂಗ್ ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ನಂತರ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಕೋರ್ಟ್ ವಶಕ್ಕೆ ನೀಡಿದ್ದರು.

ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಶಸ್ತ್ರಾಸ್ತ್ರ ತಡೆ ಕಾಯ್ದೆಯಡಿ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಹಾಗೂ ರಜತ್ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ವಿಚಾರಣೆ ವೇಳೆ ರೀಲ್ಸ್ ನಲ್ಲಿ ಹಿಡಿದಿದ್ದು ಒರಿಜಿನಲ್ ಮಚ್ಚಲ್ಲ, ಫೈಬರ್ ಮಚ್ಚು ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದರು. ಅಲ್ಲದೇ ರೀಲ್ಸ್ ವಿಡಿಯೋಗೆ ಬಳಸಲಾದ ಮಚ್ಚು ಎಂದು ಫೈಬರ್ ಮಚ್ಚನ್ನು ಪೊಲೀಸರ ಮುಂದೆ ಒಪ್ಪಿಸಿ, ಸುಳ್ಳು ಹೇಳಿ ತನಿಖೆಯ ದಾರಿ ತಪ್ಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ನಿಟ್ಟಿನಲ್ಲಿ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು.ಪೊಲೀಸರ ಸೂಚನೆ ಮೇರೆಗೆ ವಿನಯ್ ಹಾಗೂ ರಜತ್ ಬಸವೇಶ್ವರ ನಗರ ಠಾಣೆಗೆ ವಿಚಾರಣೆ ಹಾಜರಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular