HomeLatest NewsBREAKING: ಮಧ್ಯರಾತ್ರಿ ಯಮನ ರೂಪನಲ್ಲಿ ಬಂದು ಬಸ್ ಗೆ ಅಪ್ಪಳಿಸಿದ ಲಾರಿ: ಬೆಂಕಿ ತಗುಲಿ ನಿದ್ದೆಯಲ್ಲಿದ್ದ...

BREAKING: ಮಧ್ಯರಾತ್ರಿ ಯಮನ ರೂಪನಲ್ಲಿ ಬಂದು ಬಸ್ ಗೆ ಅಪ್ಪಳಿಸಿದ ಲಾರಿ: ಬೆಂಕಿ ತಗುಲಿ ನಿದ್ದೆಯಲ್ಲಿದ್ದ 17 ಪ್ರಯಾಣಿಕರು ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಡಿವೈಡರ್ ದಾಟಿ ಬಂದ ಲಾರಿ ಸೀಬರ್ಡ್ ಖಾಸಗಿ ಸ್ಲೀಪರ್ ಕೋಚ್ ಬಸ್ ಗೆ ಡಿಕ್ಕಿ ಹೊಡೆದಿದ್ದು, 17 ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ.

ಚಿತ್ರದುರ್ಗದಲ್ಲಿ ಮಧ್ಯರಾತ್ರಿ ಭೀಕರ ದುರಂತ ಸಂಭವಿಸಿದೆ. ಖಾಸಗಿ ಬಸ್ ಗೆ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಗೆ ಬೆಂಕಿ ತಗುಲಿ ಬಸ್ ನಲ್ಲಿದ್ದ 17 ಜನ ಸಾವನ್ನಪ್ಪಿದ್ದಾರೆ. ಸೀ ಬರ್ಡ್ ಖಾಸಗಿ ಸ್ಲೀಪರ್ ಕೋಚ್ ಬಸ್ ಗೆ ಬೆಂಕಿ ತೆಗುಲಿ ದುರಂತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಲು ಸಾಲು ರಜೆ ಹಿನ್ನೆಲೆ ಊರಿಗೆ ಹೊರಟಿದ್ದ ಜನ ನಿದ್ದೆಯ ಮುಂಪರಿನಲ್ಲಿಯೇ ಸುಟ್ಟು ಕರಕಲಾಗಿದ್ದಾರೆ. ಯಮನ ರೂಪನಲ್ಲಿ ಬಂದ ಲಾರಿ ಬಸ್ ಗೆ ಅಪ್ಪಳಿಸಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಒಳಗೆ ಸಿಲುಕಿದ ಪ್ರಯಾಣಿಕರು ಬಸ್ ನಿಂದ ಹೊರಲಾರದೆ ಸಜೀವ ದಹನವಾಗಿದ್ದಾರೆ. 17 ಹೆಚ್ಚು ಪ್ರಯಾಣಿಕರು ಮೃತಪಟ್ಟಿದ್ದಾರೆ. ಗುರುತು ಪತ್ತೆಯಾಗದಷ್ಟು ಬಸ್ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಗಾಯಾಳುಗಳನ್ನು ಹಿರಿಯೂರು, ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular