ಕಲಬುರಗಿ: ಕಲಬುರಗಿ ಜಿಲ್ಲೆ ಶಹಾಬಾದ್ ರೈಲ್ವೆ ನಿಲ್ದಾಣದಲ್ಲಿ ರೈಲಿಗೆ ತಲೆ ಕೊಟ್ಟು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
23 ವರ್ಷದ ಶಿವಪ್ಪ ಮತ್ತು 16 ವರ್ಷದ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಶಹಾಬಾದ್ ತಾಲೂಕಿನ ದೇವನತೆಗನೂರು ಗ್ರಾಮದವರಾಗಿದ್ದಾರೆ. ಅನ್ಯಜಾತಿಯವರಾಗಿದ್ದ ಅಪ್ರಾಪ್ತ ಬಾಲಕಿ ಮತ್ತು ಯುವಕ ಪ್ರೀತಿಗೆ ಮನೆಯವರು ವಿರೋಧಿಸುತ್ತಾರೆ ಎಂದು ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

