HomeKarnatakaBREAKING : ಕಾಫಿನಾಡಿನಲ್ಲಿ ಪ್ರೇಮಿಗಳ ದುರಂತ ಅಂತ್ಯ : ಪ್ರೇಯಸಿಯನ್ನು ಕೊಂದು ಯುವಕ ಆತ್ಮಹತ್ಯೆ.!

BREAKING : ಕಾಫಿನಾಡಿನಲ್ಲಿ ಪ್ರೇಮಿಗಳ ದುರಂತ ಅಂತ್ಯ : ಪ್ರೇಯಸಿಯನ್ನು ಕೊಂದು ಯುವಕ ಆತ್ಮಹತ್ಯೆ.!

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪ್ರೇಮಿಗಳ ದುರಂತ ಅಂತ್ಯವಾಗಿದ್ದು, ಪ್ರೇಯಸಿಯನ್ನು ಕೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಬಂದಿದ್ದ ಯುವಕ, ಯವತಿಯನ್ನು ಕಾರಿನಲ್ಲೇ ಸಾಯಿಸಿ ನಂತರ ಕಾಫಿತೋಟವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಚಿಕ್ಕಮಗಳೂರಿನ ಪೂರ್ಣಿಮ, ಭದ್ರಾವತಿಯ ಮಧು ಇಬ್ಬರು ಪ್ರೇಮಿಗಳಾಗಿದ್ದು, ಚಿಕ್ಕಮಗಳೂರಿನಲ್ಲಿ ದಾರುಣ ಅಂತ್ಯ ಕಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾರಿನಲ್ಲಿ ಯುವತಿ ಪೂರ್ಣಿಮ ಶವ ಪತ್ತೆಯಾದರೆ, ಹತ್ತಿರದ ಕಾಫಿ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular