ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಹೆಚ್ಚುವರಿ ಎಸ್ಪಿ -1 ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಲಾಗಿದೆ.
ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜಾಗ ತೋರಿಸದೆ ತಿಮ್ಮಯ್ಯ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದ್ದು, ಅವರ ಡಿಢೀರ್ ವರ್ಗಾವಣೆ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
ಮಂಡ್ಯ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಬಳ್ಳಾರಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ನವೀನ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.