ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ನಿರ್ವಹಣಾ ಕಾಮಗಾರಿಗಳು ಯಶಸ್ವಿಯಾಗಿ ಪೂರ್ಣಗೊಂಡಿರುವುದರಿಂದ, ಮೆಟ್ರೋ ರೈಲು ಸೇವೆಗಳು ಇಂದು ಬೆಳಿಗ್ಗೆ 07:00 ಗಂಟೆಯಿಂದ ಸಂಪೂರ್ಣ ನೇರಳೆ ಮಾರ್ಗದಲ್ಲಿ ಲಭ್ಯವಿರುತ್ತವೆ. ಪ್ರಯಾಣಿಕರು ಈ ಮಾಹಿತಿಯನ್ನು ಗಮನಿಸಿ ಮೆಟ್ರೋ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿನಂತಿಸಲಾಗಿದೆ.
ಈ ಮೊದಲು ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಹೇಳಲಾಗಿತ್ತು. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ವು ನೇರಳೆ ಮಾರ್ಗದಲ್ಲಿನ ಅತ್ತಿಗುಪ್ಪೆ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವಿನ ಭಾಗದಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ದಿನಾಂಕ 31ನೇ ಮೇ 2026 (ಭಾನುವಾರ) ರಂದು ಕೈಗೊಳ್ಳಲಾಗುತ್ತಿದೆ. ಈ ಕಾಮಗಾರಿಗಳನ್ನು ಸುಗಮವಾಗಿ ನಿರ್ವಹಿಸುವ ಉದ್ದೇಶದಿಂದ, ನೇರಳೆ ಮಾರ್ಗದಲ್ಲಿನ ದೀಪಾಂಜಲಿನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್ಆರ್) ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸಂಚಾರವನ್ನು ಬೆಳಿಗ್ಗೆ 07:00 ಗಂಟೆಯಿಂದ 09:00 ಗಂಟೆಯವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು ಹೇಳಲಾಗಿತ್ತು
ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿರುವುದರಿಂದ ಸೇವೆ ಲಭ್ಯವಿದೆ ಎಂದು ತಿಳಿಸಲಾಗಿದೆ.

