HomeLatest NewsBREAKING: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಭಾರೀ ಅಗ್ನಿ ಅವಘಡ: ಹತ್ತಿ ಮಿಲ್ ಗೆ ಬೆಂಕಿ...

BREAKING: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಭಾರೀ ಅಗ್ನಿ ಅವಘಡ: ಹತ್ತಿ ಮಿಲ್ ಗೆ ಬೆಂಕಿ ತಗುಲಿ 15 ಕೋಟಿ ರೂ. ನಷ್ಟ

ಯಾದಗಿರಿ: ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹುಲಕಲ್ ಗ್ರಾಮದ ಸಮೀಪ ಮಣಿಕಂಠ ಕಾಟನ್ ಜಿನ್ನಿಂಗ್ ಇಂಡಸ್ಟ್ರಿಸ್ ಹತ್ತಿ ಮಿಲ್ ನಲ್ಲಿ ವಿದ್ಯುತ್ಶಾರ್ಟ್ ಸರ್ಕ್ಯೂಟ್ ನಿಂದ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಅವಘಡದಲ್ಲಿ ದಾಸ್ತಾನು ಮಾಡಲಾಗಿದ್ದ ಭಾರಿ ಪ್ರಮಾಣದ ಹತ್ತಿ ಸುಟ್ಟು ಹೋಗಿದೆ. ಸುಮಾರು 15 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ.

ಸೋಮವಾರ ಸಂಜೆ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ತಗುಲಿ ದಟ್ಟ ಹೊಗೆ ಆವರಿಸಿದ್ದು, ನಂತರ ಹತ್ತಿ ದಾಸ್ತಾನಿಗೆ ತಗುಲಿ ಹೊತ್ತಿ ಉರಿದಿದೆ. ಬೆಂಕಿಯ ಕೆನ್ನಾಲಿಗೆಗೆ ಹತ್ತಿ ಮಿಲ್ ನಲ್ಲಿದ್ದ ಯಂತ್ರೋಪಕರಣಗಳು, ದಾಸ್ತಾನು ಮಾಡಲಾಗಿದ್ದ ಹತ್ತಿ ಸಂಪೂರ್ಣ ಸುಟ್ಟು ಹೋಗಿದ್ದು, ಸುಮಾರು 15 ಕೋಟಿ ರೂ. ನಷ್ಟು ನಷ್ಟವಾಗಿದೆ.

ಭಾರಿ ಪ್ರಮಾಣದಲ್ಲಿ ಬೆಂಕಿ ಆವರಿಸಿದ್ದರಿಂದ ತಡರಾತ್ರಿವರೆಗೆ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಲಾಗಿದೆ. ಯಾದಗಿರಿ, ಶಹಾಪುರ, ಜೇವರ್ಗಿ ಅಗ್ನಿಶಾಮಕ ಠಾಣೆಗಳಿಂದ ವಾಹನಗಳನ್ನು ತರಿಸಲಾಗಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು, ಮಿಲ್ ಸಿಬ್ಬಂದಿ, ಸಾರ್ವಜನಿಕರು ಹರಸಾಹಸ ನಡೆಸಿದ್ದಾರೆ. ಯಂತ್ರೋಪಕರಣಗಳು ಸೇರಿದಂತೆ ದಾಸ್ತಾನು ಮಾಡಿದ್ದ ಸಾವಿರಾರು ಕ್ವಿಂಟಲ್ ಹತ್ತಿ ಸುಟ್ಟು ಹೋಗಿದೆ. ಭಾರಿ ಎತ್ತರದವರೆಗೆ ಬೆಂಕಿಯ ಕೆನ್ನಾಲಿಗೆ ಚಾಚಿ ದಟ್ಟ ಹೊಗೆ ಇಡೀ ಪ್ರದೇಶದ ಸುತ್ತ ಆವರಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular