ತುಮಕೂರು: ತುಮಕೂರಿನ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ವಸಂತ ನರಸಾಪುರದ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಫೋಮ್ ಮ್ಯಾನುಫ್ಯಾಕ್ಚರಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಂದು ಭಾನುವಾರವಾಗಿದ್ದರಿಂದ ಕಾರ್ಮಿಕರು ಇರಲಿಲ್ಲ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಫ್ಯಾಕ್ಟರಿಯಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.