HomeLatest NewsBREAKING: ಶಿರಹಟ್ಟಿ ಪಶು ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ, ಅಪಾರ ಹಾನಿ

BREAKING: ಶಿರಹಟ್ಟಿ ಪಶು ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ, ಅಪಾರ ಹಾನಿ

ಗದಗ: ಗದಗ ಜಿಲ್ಲೆ ಶಿರಹಟ್ಟಿಯ ಪಶು ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ ಅಪಾರ ಹಾನಿ ಸಂಭವಿಸಿದೆ. ಸಂಜೆ 7 ಗಂಟೆಯ ಸುಮಾರಿಗೆ ಬೆಂಕಿ ತಗುಲಿದೆ.

ಆಸ್ಪತ್ರೆಯಲ್ಲಿನ ಕಂಪ್ಯೂಟರ್, ಕಚೇರಿ ಪೀಠೋಪಕರಣ, ದಾಖಲೆಗಳು ಸುಟ್ಟು ಭಸ್ಮವಾಗಿವೆ. ಕಚೇರಿಯ ಅವಧಿ ಮುಗಿದಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಶಿರಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular