ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. ವಿವಿಧ ಹಂತದ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗಿದೆ.
9 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.
ಓರ್ವ ಅಪರ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಯನ್ನು ವರ್ಗಾಯಿಸಲಾಗಿದೆ.
ಮೂವರು ಜಿಲ್ಲಾ ಸರ್ಜನ್ ಗಳು ಮತ್ತು ಇಲಾಖೆಯ ಎಂಟು ಉಪ ನಿರ್ದೇಶಕರನ್ನು ವರ್ಗಾವಣೆ ಮಾಡಲಾಗಿದೆ.
8 ಜನ ಪ್ರಾಂಶುಪಾಲರು, 42 ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳು, 21 ತಾಲೂಕು ಆರೋಗ್ಯ ಅಧಿಕಾರಿಗಳು ಸೇರಿ 90ಕ್ಕೂ ಹೆಚ್ಚು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

