ಶಿವಮೊಗ್ಗ: ಮನೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು ಮಾಡಿದ್ದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, 8.76 ಕ್ವಿಂಟಲ್ ಅಕ್ಕಿ ಜಪ್ತಿ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯ ರಿಪ್ಪನ್ ಪೇಟೆಯಲ್ಲಿ ಘಟನೆ ನಡೆದಿದೆ. ರಿಪ್ಪನ್ ಪೇಟೆಯ ಸಾಗರ ರಸ್ತೆಯ ಕಾಲೇಜು ಮುಂಭಾಗದಲ್ಲಿರುವ ಮೀನಾಕ್ಷಮ್ಮ ಎಂಬುವರ ಮನೆಯ ಮೇಲೆ ಖಚಿತ ಮಾಹಿತಿ ಆಧರಿಸಿ ಪಿಎಸ್ಐ ರಾಜು ರೆಡ್ಡಿ ನೇತೃತ್ವದ ಪೊಲೀಸ್ ತಂಡ ದಾಳಿ ಮಾಡಿದೆ. ದಾಳಿಯ ವೇಳೆ 8.76 ಕ್ವಿಂಟಲ್ ಅಕ್ಕಿ ಪತ್ತೆಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಚನಾಲ ಗ್ರಾಮದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು ಎಲ್ಲಾ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಮಾಹಿತಿ ಪಡೆದ ತಹಶೀಲ್ದಾರ್ ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.