BREAKING : ಬೆಂಗಳೂರಿನಲ್ಲಿ ಯುವತಿಯ ಖಾಸಗಿ ಭಾಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕ ಅರೆಸ್ಟ್ |WATCH VIDEO

ಬೆಂಗಳೂರು : ಬೆಂಗಳೂರಿನಲ್ಲಿ ಯುವತಿಯ ಖಾಸಗಿ ಭಾಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಕೊನೆಗೂ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಆರೋಪಿಯನ್ನು 26 ವರ್ಷದ ಸಂತೋಷ್ ಎಂದು ಗುರುತಿಸಲಾಗಿದೆ. ನಗರದ ಜಾಗ್ವಾರ್ ಶೋರೋಂ ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಸಂತೋಷ್ ಪ್ರಕರಣದ ಬಳಿಕ ತಮಿಳುನಾಡಿನ ಸೇಲಂಗೆ ಪರಾರಿಯಾಗಿದ್ದನು. ನಂತರ ಕೇರಳಕ್ಕೆ ಎಸ್ಕೇಪ್ ಆಗಿದ್ದನು ಎನ್ನಲಾಗಿದೆ. ಕಾರ್ಯಾಚರಣೆ ನಡೆಸಿದ . ಎಸ್ ಜಿ ಪಾಳ್ಯ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 1600 ಕ್ಕೂ ಹೆಚ್ಚು ಸಿಸಿಸಿಟಿ ಪರಿಶೀಲಿಸಿದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಏಪ್ರಿಲ್ 3 ರಂದು ನಡೆದ ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನಂತರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ನಗರದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಆಕ್ರೋಶಕ್ಕೆ ಕಾರಣವಾಗಿತ್ತು.

ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ಶಾಂತ ವಸತಿ ಕಾಲೋನಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ವ್ಯಕ್ತಿಯೊಬ್ಬ ಅವಳನ್ನು ಹಿಡಿದುಕೊಂಡು ಖಾಸಗಿ ಅಂಗ ಸ್ಪರ್ಶಿಸಿ ಎಸ್ಕೇಪ್ ಆಗಿದ್ದನು. ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read