ಕೋಲಾರ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಬಳಿ ನಡೆದಿದೆ.
ನರಸಾಪುರ ಗ್ರಾಮದ ನಿವಾಸಿ ಯಲ್ಲೇಶ್(42) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ನರಸಾಪುರ ಗ್ರಾಮದ ನಿವಾಸಿ ಯಲ್ಲೇಶ್(42) ಬರ್ಬರವಾಗಿ ಕೊಲೆ ಮಾಡಲಾಗಿದೆ. ಅಕ್ರಮ ಸಂಬಂಧದ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಸ್ಪಿ ಕನ್ನಿಕಾ ಸಿಕ್ರಿವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

