HomeCrimeBREAKING: ಹಳೆ ದ್ವೇಷದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಬರ್ಬರ ಹತ್ಯೆ

BREAKING: ಹಳೆ ದ್ವೇಷದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಬರ್ಬರ ಹತ್ಯೆ

ಕೊಪ್ಪಳ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ನಡೆದಿದೆ.

ಚೆನ್ನಪ್ಪ ಹುಸೇನಪ್ಪ ನಾರಿನಾಳ(35) ಅವರನ್ನು ಮಚ್ಚು, ಲಾಂಗ್ ಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ರವಿ ನಾರಿನಾಳ, ಪ್ರದೀಪ ನಾರಿನಾಳ, ಮಂಜುನಾಥ ನಾರಿನಾಳ, ನಾಗರಾಜ ನಾರಿನಾಳ, ಶಾಮಣ್ಣ ಸೇರಿ 10 ಜನರ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದ್ದು, ಎಫ್ಐಆರ್ ದಾಖಲಿಸಲಾಗಿದೆ.

ಆರೋಪಿಗಳ ಬಂಧನಕ್ಕೆ ತಾವರಗೇರಾ ಠಾಣೆ ಪೊಲೀಸರು ಬಲೆ ಬೀಸಿದ್ದಾರೆ. ತಾವರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular