HomeLatest NewsBREAKING: ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ, ದೇಹ ಛಿದ್ರ ಛಿದ್ರ

BREAKING: ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ, ದೇಹ ಛಿದ್ರ ಛಿದ್ರ

ಮೈಸೂರು: ಮೈಸೂರಿನಲ್ಲಿ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಕ್ಕರಹಳ್ಳಿ ರೈಲ್ವೆ ಗೇಟ್ ಸಮೀಪ ರೈಲುಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ದೇಹ ಛಿದ್ರ ಛಿದ್ರವಾಗಿದೆ.

ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಸ್ಥಳಾಂತರಿಸಲಾಗಿದೆ. ಮೃತನ ಗುರುತು ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಮೈಸೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular