BREAKING : ಬೆಂಗಳೂರಲ್ಲಿ ‘ನಮ್ಮ ಮೆಟ್ರೋ’ ಟ್ರ್ಯಾಕ್ ಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು : ಬೆಂಗಳೂರಲ್ಲಿ ‘ಮೆಟ್ರೋ’ ಟ್ರ್ಯಾಕ್ ಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅತ್ತಿಗುಪ್ಪೆಯಲ್ಲಿ ನಡೆದಿದೆ.

ಅತ್ತಿಗುಪ್ಪೆ ಮೆಟ್ರೋ ರೈಲ್ವೇ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮೆಟ್ರೋ ರೈಲು ಬರುತ್ತಿರುವಾಗಲೇ ವ್ಯಕ್ತಿಯೋರ್ವ ಮೆಟ್ರೋ ಟ್ರ್ಯಾಕ್ ಗೆ ಜಿಗಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಮೃತನ ಗುರುತು ಪತ್ತೆಯಾಗಿಲ್ಲ, ಈ ಹಿನ್ನೆಲೆ ಕೆಲವು ಕಾಲ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.ಅತ್ತಿಗುಪ್ಪೆ ಮೆಟ್ರೋ ರೈಲ್ವೇ ನಿಲ್ದಾಣಕ್ಕೆ ಚಂದ್ರಾಲೇಔಟ್ ಪೊಲೀಸರು ಧಾವಿಸಿ ಸ್ಥಳ ಮಹಜರು ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read