ಬೆಂಗಳೂರು: ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
ಬಿಂಎಂಆರ್ಸಿಎಲ್ ಅಧಿಕಾರಿಗಳು ಪೊಲೀಸರಿಗೆ ಕಾಯುತ್ತಿದ್ದಾರೆ. ಮೈಸೂರು ರಸ್ತೆಯಿಂದ ಚೆಲ್ಲಘಟ್ಟವರೆಗೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ.
ವೈಟ್ಫೀಲ್ಡ್ ನಿಂದ ಮೈಸೂರು ರಸ್ತೆ ನಿಲ್ದಾಣದವರೆಗೆ ಮೆಟ್ರೋ ಸಂಚಾರ ಇದೆ. ಬೆಳಗ್ಗೆ 8:15ಕ್ಕೆ ನೇರಳೆ ಮಾರ್ಗದಲ್ಲಿ ಘಟನೆ ನಡೆದಿದೆ. ಟ್ರ್ಯಾಕ್ ಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
