ಬೆಂಗಳೂರು: ಕಾರ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೆಚ್ಎಎಲ್ ರಸ್ತೆಯಲ್ಲಿ ತಡರಾತ್ರಿ ಘಟನೆ ನಡೆದಿದೆ.
ಕಾರ್ ಡಿಕ್ಕಿಯಾಗಿ 60 ವರ್ಷದ ಜಯಪಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರ್ ಚಾಲಕವನ್ನು ವಶಕ್ಕೆ ಪಡೆಯಲಾಗಿದೆ. ಕಾರ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಜೆಬಿ ನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

