HomeLatest NewsBREAKING: ಮನೆ ಬಿಟ್ಟು ಹೋದ ಪುತ್ರಿ: ಪೊಲೀಸ್ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಸಾವು

BREAKING: ಮನೆ ಬಿಟ್ಟು ಹೋದ ಪುತ್ರಿ: ಪೊಲೀಸ್ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಸಾವು

ಚಿತ್ರದುರ್ಗ: ಹೊಳಲ್ಕೆರೆ ಪೊಲೀಸ್ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಚಿತ್ರದುರ್ಗ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

45 ವರ್ಷದ ಅಜ್ಜಯ್ಯ ಮೃತಪಟ್ಟವರು. ಹೊಳಲ್ಕೆರೆ ಠಾಣೆ ಪೊಲೀಸರ ನಿರ್ಲಕ್ಷ್ಯಕ್ಕೆ ಬೇಸತ್ತು ಅಜ್ಜಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅಜ್ಜಯ್ಯ ಅವರ ಪುತ್ರಿ ಮನೆ ಬಿಟ್ಟು ಹೋಗಿದ್ದಕ್ಕೆ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದರು. ಪುತ್ರಿಯನ್ನು ಕರೆದೊಯ್ದ ಯುವಕನ ವಿರುದ್ಧ ದೂರು ನೀಡಲು ಹೋಗಿದ್ದರು. ಪುತ್ರಿಯನ್ನು ಕರೆಸಿ ಮಾತನಾಡಲು ಅವಕಾಶ ಕೊಡಿ ಎಂದು ಅಜ್ಜಯ್ಯ ಪೊಲೀಸರಿಗೆ ಮನವಿ ಮಾಡಿದ್ದರು. ಆದರೆ ಅವರ ಮನವಿಗೆ ಸ್ಪಂದಿಸದ ಪೊಲೀಸರು ಅಲೆದಾಡಿಸಿದ್ದರು.

ಇದರಿಂದ ಮನನೊಂದು ಪೊಲೀಸ್ ಠಾಣೆ ಬಳಿಯೇ ಅಜ್ಜಯ್ಯ ವಿಷ ಸೇವಿಸಿದ್ದಾರೆ. ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹೊಳಲ್ಕೆರೆ ಪೊಲೀಸರ ವಿರುದ್ಧ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular