ಮಂಗಳೂರು: ಸಿಡಿಲು ಬಡಿದು ಮನೆಯಲ್ಲಿ ಕುಳಿತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಶಾಂತಿಗೋಡು ಆನಡ್ಕ ಗ್ರಾಮದಲ್ಲಿ ನಡೆದಿದೆ.
ವಾಮನ(40) ಮೃತಪಟ್ಟವರು ಎಂದು ಹೇಳಲಾಗಿದೆ. ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದ್ದು, ವಾಮನ ಮನೆಯಲ್ಲಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಈ ಕುರಿತಾಗಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.