ಮೈಸೂರು: ಗಣಪತಿ ಮೆರವಣಿಗೆಯ ವೇಳೆ ಟ್ರ್ಯಾಕ್ಟರ್ ನಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಹಾರವೆ ಗ್ರಾಮದಲ್ಲಿ ಘಟನೆ ನಡೆದಿದೆ.
ಟ್ರ್ಯಾಕ್ಟರ್ ನಿಂದ ಕುಸಿದು ಬಿದ್ದು ಆಟೋ ರಾಜು(34) ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಗಣಪತಿ ವಿಸರ್ಜನೆಗಾಗಿ ಟ್ರ್ಯಾಕ್ಟರ್ ನಲ್ಲಿ ಮೆರವಣಿಗೆ ಮಾಡಲಾಗುತ್ತಿತ್ತು. ಮನೆ ಬಳಿ ಬಂದ ಗಣಪನಿಗೆ ಪೂಜೆ ಸಲ್ಲಿಸಲು ರಾಜು ಟ್ರ್ಯಾಕ್ಟರ್ ಹತ್ತಿದ್ದರು. ಪೂಜೆ ಸಲ್ಲಿಸುತ್ತಲೇ ಕೆಳಗೆ ಬಿದ್ದ ರಾಜು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹುಣಸೂರು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ರಾಜು ಮೃತಪಟ್ಟಿದ್ದಾರೆ ಎನ್ನಲಾಗಿದೆ.