HomeLatest NewsBREAKING: ಗಣಪತಿ ಮೆರವಣಿಗೆಯಲ್ಲಿ ಪೂಜೆ ಮಾಡುವಾಗಲೇ ಟ್ರ್ಯಾಕ್ಟರ್ ನಿಂದ ಬಿದ್ದು ವ್ಯಕ್ತಿ ಸಾವು

BREAKING: ಗಣಪತಿ ಮೆರವಣಿಗೆಯಲ್ಲಿ ಪೂಜೆ ಮಾಡುವಾಗಲೇ ಟ್ರ್ಯಾಕ್ಟರ್ ನಿಂದ ಬಿದ್ದು ವ್ಯಕ್ತಿ ಸಾವು

ಮೈಸೂರು: ಗಣಪತಿ ಮೆರವಣಿಗೆಯ ವೇಳೆ ಟ್ರ್ಯಾಕ್ಟರ್ ನಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಹಾರವೆ ಗ್ರಾಮದಲ್ಲಿ ಘಟನೆ ನಡೆದಿದೆ.

ಟ್ರ್ಯಾಕ್ಟರ್ ನಿಂದ ಕುಸಿದು ಬಿದ್ದು ಆಟೋ ರಾಜು(34) ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಗಣಪತಿ ವಿಸರ್ಜನೆಗಾಗಿ ಟ್ರ್ಯಾಕ್ಟರ್ ನಲ್ಲಿ ಮೆರವಣಿಗೆ ಮಾಡಲಾಗುತ್ತಿತ್ತು. ಮನೆ ಬಳಿ ಬಂದ ಗಣಪನಿಗೆ ಪೂಜೆ ಸಲ್ಲಿಸಲು ರಾಜು ಟ್ರ್ಯಾಕ್ಟರ್ ಹತ್ತಿದ್ದರು. ಪೂಜೆ ಸಲ್ಲಿಸುತ್ತಲೇ ಕೆಳಗೆ ಬಿದ್ದ ರಾಜು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹುಣಸೂರು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ರಾಜು ಮೃತಪಟ್ಟಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular