ಕಲಬುರಗಿ: ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಕಲಬುರಗಿ ಮಿಲ್ಲತ್ ನಗರ ಬಡಾವಣೆಯಲ್ಲಿ ನಡೆದಿದೆ.
ಬಿಲಾಲ್ ಅಹಮದ್ ಅಲಿಯಾಸ್ ಸುರೇಶ್ ರೆಡ್ಡಿ(50) ಕೊಲೆಯಾದ ವ್ಯಕ್ತಿ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ದಾಳಿ ಮಾಡಿದ ದುಷ್ಕರ್ಮಿಗಳು ಸುರೇಶ್ ರೆಡ್ಡಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕಲಬುರಗಿ ಪೊಲೀಸ್ ಆಯುಕ್ತ ಡಾ. ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You Might Also Like
TAGGED:ಮಾರಕಾಸ್ತ್ರ