HomeLatest NewsBREAKING: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಬರ್ಬರ ಹತ್ಯೆ

BREAKING: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಬರ್ಬರ ಹತ್ಯೆ

ಕಲಬುರಗಿ: ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಕಲಬುರಗಿ ಮಿಲ್ಲತ್ ನಗರ ಬಡಾವಣೆಯಲ್ಲಿ ನಡೆದಿದೆ.

ಬಿಲಾಲ್ ಅಹಮದ್ ಅಲಿಯಾಸ್ ಸುರೇಶ್ ರೆಡ್ಡಿ(50) ಕೊಲೆಯಾದ ವ್ಯಕ್ತಿ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ದಾಳಿ ಮಾಡಿದ ದುಷ್ಕರ್ಮಿಗಳು ಸುರೇಶ್ ರೆಡ್ಡಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕಲಬುರಗಿ ಪೊಲೀಸ್ ಆಯುಕ್ತ ಡಾ. ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular