ರಾಮನಗರ: ತಮಿಳುನಾಡು ಗಡಿಯಲ್ಲಿ ಆನೆ ದಾಳಿಯಿಂದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬ್ಯಾಲಕೆರೆ ಗ್ರಾಮದ ಬಳಿ ಒಂಟಿ ಸಲಗದ ದಾಳಿಗೆ ವ್ಯಕ್ತಿ ಬಲಿಯಾಗಿದ್ದಾರೆ.
ತಮಿಳುನಾಡು ಗಡಿಗೆ ಹೊಂದಿಕೊಂಡಿರುವ ಬ್ಯಾಲಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಆನೆ ದಾಳಿಯಿಂದ ಬ್ಯಾಲಕೆರೆಯ ವೆಂಕಟೇಶ್(58) ಸಾವನ್ನಪ್ಪಿದ್ದಾರೆ. ಗುಮ್ಮಳಾಪುರ ಗ್ರಾಮದ ರಸ್ತೆಯಲ್ಲಿ ಶವ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆ ಹಾವಳಿ ನಿಯಂತ್ರಿಸುತ್ತಿಲ್ಲವೆಂದು ದೂರಿದ್ದಾರೆ. ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

