ಹುಬ್ಬಳ್ಳಿ: ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ವ್ಯಕ್ತಿಗೆ ಚಾಕುವಿನಿಂದ ಇರಿದ ಘಟನೆ ಹುಬ್ಬಳ್ಳಿಯ ಕೊಪ್ಪೀಕರ ರಸ್ತೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಪ್ರತಾಪ್ ಅಲಿಯಾಸ್ ಚೇತನ ಗೌಡರ(32) ಅವರಿಗೆ ಚಾಕುವಿನಿಂದ ಇರಿಯಲಾಗಿದೆ. ಹುಬ್ಬಳ್ಳಿ ತಾಲೂಕು ಬಿಡನಾಳ ಮಾರುತಿ ನಗರದ ನಿವಾಸಿಯಾಗಿರುವ ಪ್ರತಾಪ್ ಗೆ ಸೋನಿಯಾ ಗಾಂಧಿನಗರದ ಶಿರಿ ಮತ್ತು ಇನ್ನಿಬ್ಬರು ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ.
ಗಣೇಶ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಪ್ರತಾಪ್ ಮೂತ್ರ ವಿಸರ್ಜನೆಗೆ ಹೋಗುತ್ತಿದ್ದಾಗ ಏಕಾಏಕಿ ಚಾಕುವಿನಿಂದ ಇರಲಾಗಿದೆ. ಚಾಕು ಇರಿತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಪ್ರತಾಪ್ ಗೆ ಚಿಕಿತ್ಸೆ ನೀಡಲಾಗಿದೆ. ಟ್ರಾನ್ಸ್ಪೋರ್ಟ್ ಕಂಪನಿಯೊಂದರಲ್ಲಿ ಪ್ರತಾಪ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದು, ಒಂದು ತಿಂಗಳ ಹಿಂದೆ ಮದುವೆಯಾಗಿದ್ದರು.
ಆಸ್ಪತ್ರೆಗೆ ಹುಬ್ಬಳ್ಳಿ -ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿದ್ದಾರೆ. ಹುಬ್ಬಳ್ಳಿಯ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.