ಕಲಬುರಗಿ: ಜಮೀನು ವಿಚಾರಕ್ಕೆ ಗಲಾಟೆಯಾಗಿ ಚಾಕುವಿನಿಂದ ಇರಿದು ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಹಂಗನಹಳ್ಳಿಯಲ್ಲಿ ನಡೆದಿದೆ.
ಸಹೋದರ ಸಂಬಂಧಿಯಿಂದ ಕೊಲೆ ನಡೆದಿದೆ. ಬಸವರಾಜ್ ತಳವಾರ(34) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ತಡರಾತ್ರಿ ಬಸವರಾಜ್ ತಳವಾರ ಮತ್ತು ಗೂಳೇಶ್ ನಡುವೆ ಜಮೀನು ವಿಚಾರವಾಗಿ ಗಲಾಟೆ ನಡೆದಿತ್ತು. ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಘಟನೆ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

