ಮಂಗಳೂರು: ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿದೆ.
ಇದೇ ವೇಳೆ ಮೂರು ಬಸ್ ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಮಂಗಳೂರಿನ ನಾರಾಯಣ ಗುರು ವೃತ್ತದ ಬಳಿ ಘಟನೆ ನಡೆದಿದೆ. ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ.
ಮಂಗಳೂರಿನಲ್ಲಿ ಬಂದ್ ಹಿನ್ನೆಲೆಯಲ್ಲಿ ಖಾಸಗಿ ಬಸ್ ಗಳ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ವ್ಯಾಪಾರ ವಹಿವಾಟು ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿವೆ.
ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಂದ್ ಕರೆ ನೀಡಲಾಗಿದ್ದು, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬಿಎನ್ಎಸ್ ಕಲಂ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಇಂದಿನಿಂದ ಮೇ 6ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಆದೇಶ ಹೊರಡಿಸಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.