BREAKING : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ‘ಮಂಜುನಾಥ್ ಗೌಡ’ ಪದಗ್ರಹಣ.!

ಬೆಂಗಳೂರು : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಂಜುನಾಥ್ ಗೌಡಪದಗ್ರಹಣ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಮತ್ತಿತರಿದ್ದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ಮಂಜುನಾಥ್ ಗೌಡ ಅವರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಡಿಕೆ ಶಿವಕುಮಾರ್ ಮಾತನಾಡಿದರು.

ಯುವ ಕಾಂಗ್ರೆಸ್ ಇತಿಹಾಸದಲ್ಲೇ ಇದೊಂದು ಮಹತ್ವದ ಘಳಿಗೆ. 25 ಲಕ್ಷ ಸದಸ್ಯರನ್ನ ನೋಂದಣಿ ಮಾಡಲಾಗಿದ್ದು, ಯುವ ಕಾಂಗ್ರೆಸ್ ಘಟಕವು ಪ್ರಬಲ ರಾಜಕೀಯ ಸಂಘಟನೆಯಾಗಿ ಹೊರಹೊಮ್ಮಿದೆ. ಮಹಾತ್ಮ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಐತಿಹಾಸಿಕ ಕಾರ್ಯಕ್ರಮವನ್ನು ನಡೆಸಿದೆವು. ಇದೀಗ ಯುವ ಕಾಂಗ್ರೆಸ್ನ ಬೃಹತ್ ಕಾರ್ಯಕ್ರಮ ನಡೆಯುತ್ತಿದೆ. ತಾಲೂಕು ಮಟ್ಟದಲ್ಲೂ ಕೂಡ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಆಯೋಜಿಸಬೇಕು ಎಂದು ಡಿಕೆ ಶಿವಕುಮಾರ್ ಕರೆ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read