BREAKING : ಶಿವಮೊಗ್ಗದ ನಿವಾಸಕ್ಕೆ ಆಗಮಿಸಿದ ಮಂಜುನಾಥ್ ಪಾರ್ಥಿವ ಶರೀರ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದ |Pahalgam Terror Attack

ಶಿವಮೊಗ್ಗ : ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕರ್ನಾಟಕದ ಮಂಜುನಾಥ್ ಮತ್ತು ಭರತ್ ಭೂಷಣ್ ಅವರ ಮೃತದೇಹಗಳನ್ನು ದೆಹಲಿಯಿಂದ ಬೆಂಗಳೂರಿಗೆ ವಿಮಾನದ ಮೂಲಕ ತರಲಾಗಿತ್ತು.

ಇದೀಗ ಶಿವಮೊಗ್ಗಕ್ಕೆ ಮಂಜುನಾಥ್ ಮೃತದೇಹ ಆಗಮಿಸಿದೆ. ಶಿವಮೊಗ್ಗದ ಮಂಜುನಾಥ್ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಬೆಂಗಳೂರಿನಿಂದ ತುಮಕೂರು, ಚಿತ್ರದುರ್ಗ, ಚನ್ನಗಿರಿ ಮಾರ್ಗವಾಗಿ ಹಳೇ ಬಸ್ ಸ್ಟ್ಯಾಂಡ್, ಗೋಪಿ ಸರ್ಕಲ್ ಮೂಲಕ ಶಿವಮೊಗ್ಗಕ್ಕೆ ತೆಗೆದುಕೊಂಡು ಬರಲಾಗಿದೆ. ಶಿವಮೊಗ್ಗದ ವಿಜಯನಗರ ಬಡಾವಣೆಯಲ್ಲಿರುವ ಮಂಜುನಾಥ್ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಂಜುನಾಥ್ ಪಾರ್ಥಿವ ಶರೀರ ಆಗಮಿಸುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕರ್ನಾಟಕದ ಮಂಜುನಾಥ್ ಮತ್ತು ಭರತ್ ಭೂಷಣ್ ಅವರ ಮೃತದೇಹಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೃತದೇಹಗಳನ್ನ ತಂದು ಅಲ್ಲಿಂದ ಆಂಬುಲೆನ್ಸ್ ನಲ್ಲಿ ಸ್ವಗೃಹಕ್ಕೆ ಕೊಂಡೊಯ್ಯಲಾಗಿದೆ.

ಬೆಂಗಳೂರಿನ ಮತ್ತಿಕೆರೆಯ ನಿವಾಸಕ್ಕೆ ಭರತ್ ಭೂಷಣ್ ಮೃತದೇಹ ಕೊಂಡೊಯ್ಯಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬ್ಯಾರಿಕೇಡ್ ಅಳವಡಿಸಿ ಪೊಲೀಸರು ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಮನೆ, ಸುತ್ತಲಿನ ರಸ್ತೆಯ ಬಳಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read