BREAKING : ಶಾಸಕ ‘ಹೆಚ್.ವೈ ಮೇಟಿ’ ನಿಧನಕ್ಕೆ B.S ಯಡಿಯೂರಪ್ಪ ಸೇರಿ ಹಲವು ಬಿಜೆಪಿ ನಾಯಕರಿಂದ ಸಂತಾಪ.!

ಬೆಂಗಳೂರು : ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಹೆಚ್.ವೈ ಮೇಟಿ ಇಂದು ನಿಧನರಾಗಿದ್ದು, ಬಿ.ಎಸ್ ಯಡಿಯೂರಪ್ಪ ಸೇರಿ ಹಲವು ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ.

ಯಡಿಯೂರಪ್ಪ ಸಂತಾಪ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಹುಲ್ಲಪ್ಪ ಯಮನಪ್ಪ ಮೇಟಿ ಅವರ ಅಗಲಿಕೆ ಅತ್ಯಂತ ವಿಷಾದನೀಯವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಮಾಜಿ ಸಿಎಂ ಬೊಮ್ಮಾಯಿ ಸಂತಾಪ
ಬಾಗಲಕೋಟೆಯ ಹಿರಿಯ ಶಾಸಕರು ಹಾಗೂ ಮಾಜಿ ಸಚಿವರಾಗಿದ್ದ ಎಚ್. ವೈ. ಮೇಟಿ ಅವರು ಅನಾರೋಗ್ಯದಿಂದ ನಿಧನ ಹೊಂದಿರುವ ಸುದ್ದಿ ಕೇಳಿ ದುಖವಾಯಿತು. ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದ ಅವರು ನನಗೆ ಅತ್ಯಂತ ಆತ್ಮೀಯರಾಗಿದ್ದರು. ನನಗೆ ಅವರೊಂದಿಗೆ ಕೆಲಸ ಮಾಡುವ ಅವಕಾಶವೂ ದೊರೆತಿತ್ತು. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ, ಮೃತರ ಆತ್ಮಕ್ಕೆ ಚಿರ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಬಿ.ವೈ ವಿಜಯೇಂದ್ರ ಸಂತಾಪ
ಮಾಜಿ ಸಚಿವರೂ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಹೆಚ್.ವೈ ಮೇಟಿ ಅವರ ನಿಧನಕ್ಕೆ ಸಂತಾಪ ಕೋರುವೆ. ರಾಜಕಾರಣದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಜನಪ್ರಿಯರಾಗಿದ್ದ ಅವರ ಅಗಲಿಕೆಯಿಂದ ಅವರ ಕುಟುಂಬ ಹಾಗೂ ಅಪಾರ ಅಭಿಮಾನಿ ವರ್ಗಕ್ಕೆ ಉಂಟಾಗಿರುವ ದುಃಖ ಭರಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಓಂ ಶಾಂತಿ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read