ಕೊಪ್ಪಳ: ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಭಾನಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಅಪಘಾತ ಸಂಭವಿಸಿದೆ.
ಲಾರಿ ಡಿಕ್ಕಿ ಹೊಡೆದು ಮಾರುತಿ ಓಮ್ನಿ ವಾಹನದಲ್ಲಿದ್ದ ಮೂವರು ಸಾವು ಕಂಡಿದ್ದಾರೆ. ಕೆಂಚಮ್ಮ ಬಾಳೆಕಾಯಿ(35), ಅಮೃತ ಕೋಟ್ಯಾಳ್(25), ರಮೇಶ ಬಳ್ಳಾರಿ(45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಉಳಿದ ಆರು ಜನ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರು ಜನ ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮೃತರು ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ನಿವಾಸಿಗಳಾಗಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

