BREAKING : ವಸತಿ ಯೋಜನೆಯಲ್ಲಿ ಭಾರಿ ಭ್ರಷ್ಟಾಚಾರ ಆರೋಪ : ರಾಜ್ಯಪಾಲರಿಗೆ ದೂರು ಸಲ್ಲಿಕೆ.!

ಬೆಂಗಳೂರು : ವಸತಿ ಯೋಜನೆಯಲ್ಲಿ ಭಾರಿ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಈ ಸಂಬಂಧ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿದೆ.

ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನೇಶ್ ಕಲ್ಲಹಳ್ಳಿ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ. ಪ್ರಕರಣ ಸಂಬಂಧ ತನಿಖೆಗೆ ಆದೇಶ ನೀಡುವಂತೆ ಮನವಿ ಮಾಡಿದ್ದಾರೆ.

ಆಳಂದ ಶಾಸಕ ಬಿ ಆರ್ ಪಾಟೀಲ್ ಹೇಳಿಕೆಯಿಂದ ಭ್ರಷ್ಟಾಚಾರ ಬಯಲಾಗಿದೆ. ಬಡವರಿಗೆ ನೀಡುವ ಮನೆಗಳಲ್ಲಿ ಹಣ ವಸೂಲಿ ಮಾಡಲಾಗುತ್ತಿದೆ. ಬಿ ಆರ್ ಪಾಟೀಲ್ ಹೇಳಿಕೆಯನ್ನ ಆಧಾರವಾಗಿ ಪರಿಗಣಿಸಿ ಎಂದು ಮನವಿ ಮಾಡಿದ್ದಾರೆ.

ವಸತಿ ಇಲಾಖೆಯಲ್ಲಿ ಹಣ ಪಡೆದು ಮನೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಆರ್.ಪಾಟೀಲ್, ನಾನು ಸತ್ಯವನ್ನೇ ಹೇಳಿದ್ದೇನೆ. ಆ ಆಡಿಯೋ ನನ್ನದೇ. ನನ್ನ ಕ್ಷೇತ್ರಕ್ಕೆ ಮನೆ ಕೊಡಿ ಎಂದು ನಾನು ಕೊಟ್ಟ ನಾಲ್ಕು ಪತ್ರಕ್ಕೂ ಮನೆ ಸಿಕ್ಕಿಲ್ಲ. ನಾನು ನಾಲ್ಕು ಪತ್ರಗಳನ್ನು ಕೊಟ್ಟರೂ ಕ್ಷೇತ್ರಕ್ಕೆ ಮನೆ ಸಿಕ್ಕಿಲ್ಲ. ಪಂಚಾಯಿತಿ ಅಧ್ಯಕ್ಷರು ಮನೆ ತಂದಿದ್ದಾರೆ. ವಸತಿ ಯೋಜನೆ ಮನೆ ಹಂಚಿಕೆಯಲ್ಲಿ ಹಣ ಪಡೆಯಲಾಗಿದೆ ಎಂದು ಹೇಳಿದ್ದರು. 5-6 ಪಂಚಾಯಿತಿಗಳಲ್ಲಿ ಹಣ ಕೊಟ್ಟು ಮನೆ ಪಡೆದುಕೊಂಡಿದ್ದಾರೆ. ಅದು ನನ್ನದೇ ಆಡಿಯೋ. ನಾನು ಸತ್ಯವನ್ನೇ ಹೇಳಿದ್ದೇನೆ ಎಂದು ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read