BREAKING: ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅಗ್ನಿ ಅವಘಡ

 ಬೆಳಗಾವಿ: ಬೆಳಗಾವಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಮೂರು ಅಂಗಡಿಗಳು ಧಗಧಗನೆ ಹೊತ್ತಿ ಉರಿದಿದ್ದು, ಅಪಾರ ಹಾನಿ ಸಂಭವಿಸಿದೆ.

ಬೆಳಗಾವಿಯ ರವಿವಾರ ಮಾರುಕಟ್ಟೆ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ರವಿವಾರಪೇಟೆ ಮಾರುಕಟ್ಟೆಯ ಸ್ಟೇಷನರಿ ಅಂಗಡಿ, ಪ್ಲಾಸ್ಟಿಕ್ ಅಂಗಡಿ ಸೇರಿ ಮೂರು ಅಂಗಡಿಗಳಿಗೆ ಬೆಳಗಿನ ಜಾವ 4 ಗಂಟೆಗೆ ಬೆಂಕಿ ಹೊತ್ತಿದ್ದು ಭಾರೀ ಪ್ರಮಾಣದಲ್ಲಿ ವ್ಯಾಪಿಸಿದೆ.

ಮಾಹಿತಿ ತಿಳಿದ 2 ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಬಂದು ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿ ತಗುಲಿದ ಪಕ್ಕದ ಅಂಗಡಿಗಳಿಗೂ ಬೆಂಕಿ ತಗುಲುವುದನ್ನು ತಪ್ಪಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read