HomeIndiaBREAKING : ದೆಹಲಿ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ಅವಘಢ : ಐದು ಜನರು ಸಿಲುಕಿರುವ ಶಂಕೆ

BREAKING : ದೆಹಲಿ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ಅವಘಢ : ಐದು ಜನರು ಸಿಲುಕಿರುವ ಶಂಕೆ

ನವದೆಹಲಿ: ಈಶಾನ್ಯ ದೆಹಲಿಯ ಶಹದಾರಾ ಪ್ರದೇಶದ ಮನೆಯೊಂದರಲ್ಲಿ ಶುಕ್ರವಾರ ಸಂಜೆ ಭಾರಿ ಬೆಂಕಿ ಕಾಣಿಸಿಕೊಂಡಿದೆ., ಅಗ್ನಿಶಾಮಕ ದಳದ ಇಲಾಖೆಗೆ ಮಾಹಿತಿ ನೀಡಲಾಯಿತು. ಬೆಂಕಿಯನ್ನು ನಿಯಂತ್ರಿಸಲು ಒಟ್ಟು 5 ಅಗ್ನಿಶಾಮಕ ಟೆಂಡರ್ ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯನ್ನು ನಿಯಂತ್ರಿಸುವ ಪ್ರಯತ್ನಗಳು ನಡೆಯುತ್ತಿವೆ.

ರಾಮ್ ನಗರ ಪ್ರದೇಶದ ಕಟ್ಟಡವೊಂದರಲ್ಲಿ ಸಂಜೆ 5.22 ಕ್ಕೆ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ನಮಗೆ ಕರೆ ಬಂದಿದೆ. ಐದು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಕಟ್ಟಡದಲ್ಲಿ ಐವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ನಾವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಅಗ್ನಿಶಾಮಕ ದಳದ ತಂಡವು ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular