ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ 19 ಎಲೆಕ್ಟ್ರಿಕ್ ಸ್ಕೂಟರ್ ಗಳು ಸುಟ್ಟು ಭಸ್ಮವಾಗಿವೆ.
ಯಲಚೇನಹಳ್ಳಿಯ ಕಮರ್ಷಿಯಲ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕನಕಪುರ ರಸ್ತೆ ಮೆಟ್ರೋ ನಿಲ್ದಾಣದ ಬಳಿ ಘಟನೆ ನಡೆದಿದೆ. ಎಲೆಕ್ಟ್ರಿಕ್ ದ್ವಿಚಕ್ರವಾಹನ ಪ್ಲಗ್ ಪಾಯಿಂಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ಬೆಂಕಿ ಆವರಿಸಿದ್ದರಿಂದ ಎಲೆಕ್ಟ್ರಿಕ್ ಸ್ಕೂಟರ್ ಗಳು ಹೊತ್ತಿ ಉರಿದಿವೆ.
ಇದೇ ವೇಳೆ ನೆಲಮಹಡಿಯಲ್ಲಿದ್ದ 6 ಸಿಲಿಂಡರ್ ಗಳು ಸ್ಫೋಟವಾಗಿದೆ. 6 ಸಿಲಿಂಡರ್ ಗಳಿಂದ ಗ್ಯಾಸ್ ಲೀಕ್ ಆಗಿದೆ. ಮಾಹಿತಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.