ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಜೆಸಿ ರಸ್ತೆಯಲ್ಲಿನ ಆಟೋಮೊಬೈಲ್ ಅಂಗಡಿಗೆ ಭಾರೀ ಬೆಂಕಿ ತಗುಲಿ ಹೊತ್ತಿ ಉರಿದಿದೆ.
ಮಾಹಿತಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸತತ 5 ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಸುತ್ತಮುತ್ತಲಿನ ಅಂಗಡಿಗಳಿಗೂ ಬೆಂಕಿ ವ್ಯಾಪಿಸುವುದನ್ನು ಅಗ್ನಿಶಾಮಕದಳ ಸಿಬ್ಬಂದಿ ತಪ್ಪಿಸಿದ್ದಾರೆ.
ಸತತ 5 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಲಾಗಿದೆ. ಸುಮಾರು 4 ಕೋಟಿ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.
ಜೆಸಿಬಿ ಬಳಸಿ ಶಟರ್ ಓಪನ್ ಮಾಡಲಾಗಿದೆ. ಪಕ್ಕದ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದ್ದು, ಪಕ್ಕದ ಅಂಗಡಿಯ ಗೋಡೆ ಹೊಡೆದು ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.