HomeLatest NewsBREAKING: ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: 7 ಗೂಡಂಗಡಿ ಸುಟ್ಟು ಭಸ್ಮ

BREAKING: ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: 7 ಗೂಡಂಗಡಿ ಸುಟ್ಟು ಭಸ್ಮ

ವಿಜಯಪುರ: ಅಗ್ನಿ ಅವಘಡದಲ್ಲಿ 7 ಗೂಡಂಗಡಿಗಳು ಸುಟ್ಟು ಕರಗಲಾದ ಘಟನೆ ವಿಜಯಪುರದ ಚಾಲುಕ್ಯ ನಗರದ ಎಸ್‌ಬಿಐ ಬಳಿ ನಡೆದಿದೆ.

ಸಿಗರೇಟ್ ಕಿಡಿಯಿಂದ ಬೆಂಕಿ ಹೊತ್ತಿಕೊಂಡು ಘಟನೆ ಸಂಭವಿಸಿದೆ. ಕಾಫಿ, ಟೀ, ಫುಡ್ ಸ್ಟಾಲ್ ಗಳು, ವಡಾ ಪಾವ್ ಶಾಪ್ ಗಳು ಸುಟ್ಟು ಕರಕಲಾಗಿವೆ. ಗೂಡಂಗಡಿಗಳಲ್ಲಿದ್ದ ಗ್ಯಾಸ್ ಸಿಲಿಂಡರ್ ಗಳು ಕೂಡ ಸ್ಪೋಟಗೊಂಡಿವೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular