ದಾವಣಗೆರೆ: ದಾವಣಗೆರೆಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ನಲ್ಲಿ ಘಟನೆ ನಡೆದಿದೆ.
ಸಿದ್ಧಾರ್ಥ ತ್ರಯಂಬಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಹೇಳಲಾಗಿದೆ. ಹಾನಿಕಾರಕ ಇಂಜೆಕ್ಷನ್ ಹಾಕಿಕೊಂಡು ವಿದ್ಯಾರ್ಥಿ ತ್ರಯಂಬಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕರಾಡ್ ನಿವಾಸಿ ಸಿದ್ದಾರ್ಥ್ ತ್ರಯಂಬಕೆ ಡರ್ಮಾಟಾಲಜಿ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದರು.
ನಿನ್ನೆ ಮಧ್ಯಾಹ್ನದಿಂದ ಅವರ ರೂಂ ಲಾಕ್ ಆಗಿದ್ದ ಹಿನ್ನೆಲೆಯಲ್ಲಿ ಅನುಮಾನ ಬಂದಿದೆ. ಕೊಠಡಿ ಬಾಗಿಲು ಒಡೆದು ಒಳಗೆ ಹೋದಾಗ ಆತ್ಮಹತ್ಯೆ ವಿಚಾರ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿಯ ಪೋಷಕರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

