ಬೆಂಗಳೂರು: ಅಪ್ರಾಪ್ತೆ ಮೇಲೆ ಮನೆ ಮಾಲೀಕನಿಂದ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಅತ್ಯಾಚಾರಕ್ಕೆ ಮಾಲೀಕನಿಗೆ ಬಾಡಿಗೆ ಮನೆ ಮಹಿಳೆ ಕೂಡ ಸಾಥ್ ನೀಡಿದ ಆರೋಪ ಕೇಳಿ ಬಂದಿದೆ. ಆರೋಪಿಗಳಾದ ಚಂದ್ರಶೇಖರ ಮತ್ತು ಮಂಜೂರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕಿಯನ್ನು ಪಕ್ಕದ ಮನೆ ಮಹಿಳೆ ಬಳಿ ಬಿಟ್ಟು ಪೋಷಕರು ಹೋಗಿದ್ದರು. ಈ ವೇಳೆ ಮನೆ ಮಾಲೀಕನನ್ನು ಮನೆಗೆ ಕರೆಸಿ ಅಪ್ರಾಪ್ತ ಮೇಲೆ ಅತ್ಯಾಚಾರ ಎಸಗಲಾಗಿದೆ. ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಪೋಕ್ಸೊ ಕೇಸ್ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
