ಮಂಗಳೂರು: ಮಂಗಳೂರು ಜಂಕ್ಷನ್ ಸಮೀಪ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲು ತೂರಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.
ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ರೈಲ್ವೆ ರಕ್ಷಣಾ ಪಡೆ(ಆರ್.ಪಿ.ಎಫ್.) ಪೊಲೀಸರು ಆರೋಪಿಯನ್ನು ಬಂಧಿಸಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಸುಬ್ಜಿತ್ ಮಲ್ಲಿಕ್(23) ಬಂಧಿತ ಆರೋಪಿ. ಡಿಸೆಂಬರ್ 8ರಂದು ಮಂಗಳೂರು ಜಂಕ್ಷನ್ ಸಮೀಪ ರೈಲು ಸಂಖ್ಯೆ 20645 ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ್ದು, ರೈಲಿನ ಕಿಟಕಿ ಗಾಜುಗಳಿಗೆ ಹಾನಿಯಾಗಿತ್ತು. ವಿಶೇಷ ಆರ್.ಪಿ.ಎಫ್. ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಮದ್ಯದ ಅಮಲಿನಲ್ಲಿ ಕೃತ್ಯ ಎಸಗಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ.

