BREAKING : ಚಿಕ್ಕಮಗಳೂರು ಜಿಲ್ಲೆಯಲ್ಲೂ `ವಂದೇ ಭಾರತ್ ರೈಲಿ’ಗೆ ಕಲ್ಲು ತೂರಿದ ಕಿಡಿಗೇಡಿಗಳು

ಚಿಕ್ಕಮಗಳೂರು : ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲೂ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ನಡೆದಿದೆ.

ಧಾರವಾಡ-ಬೆಂಗಳೂರಿನ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಕೆಲ ದಿನಗಳ ಹಿಂದೆ ಅಷ್ಟೇ ದಾವಣಗೆರೆಯಲ್ಲಿ ಕಲ್ಲು ತೂರಾಟ ನಡೆಸಿದ್ದರು. ಇದರ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆಯಲ್ಲೂ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.

ಇಂದು ಬೆಳಗ್ಗೆ 8.45 ರ ಸುಮಾರಿಗೆ ಚಿಕ್ಕಮಗಳೂರು ಜಿಲ್ಲೆಯ ಬೀರೂರು-ಅರಸೀಕರೆ ನಡುವೆ ಸಂಚರಿಸುತ್ತಿದ್ದ ವೇಳೆ ಕಿಡಿಗೇಡಿಗಳು ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಕಲ್ಲು ತೂರಾಟ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read