ಚಿತ್ರದುರ್ಗ: ಚಿತ್ರದುರ್ಗದಲ್ಲಿ ಮಹಿಳೆಯ ಮಾಂಗಲ್ಯ ಸರ ಕಳವು ಮಾಡಲಾಗಿದೆ. ಮನೆ ಮುಂದೆ ವಾಕ್ ಮಾಡುತ್ತಿದ್ದ ಮಹಿಳೆಯ ಸರವನ್ನು ಕಳಪು ಮಾಡಲಾಗಿದೆ.
ಪಲ್ಸರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸರ ಎಗರಿಸಿ ಪರಾರಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಘಟನೆ ನಡೆದಿದೆ. ನಿವೃತ್ತ ಎಎಸ್ಐ ತಿಪ್ಪೇಸ್ವಾಮಿ ಅವರ ಪತ್ನಿ ವಾಕ್ ಮಾಡುವಾಗ. 4 ಲಕ್ಷ ರೂಪಾಯಿ ಮೌಲ್ಯದ 50 ಗ್ರಾಂ ಚಿನ್ನದ ಸರ ದೋಚಲಾಗಿದೆ. ಹಿರಿಯೂರು ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಸರಗಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.