HomeKarnatakaBREAKING: ಶಾಸಕ ಬೈರತಿ ಬಸವರಾಜ್ ಆಸ್ಪತ್ರೆಗೆ ದಾಖಲು

BREAKING: ಶಾಸಕ ಬೈರತಿ ಬಸವರಾಜ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಇಸಿಜಿಯಲ್ಲಿ ಸ್ವಲ್ಪ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಶಾಸಕ ಬೈರತಿ ಬಸವರಾಜ್ ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಳೆ ಬೈರತಿ ಬಸವರಾಜ್ ಗೆ ಆಂಜಿಯೋಗ್ರಾಂ ಮಾಡಲಾಗುವುದು. ಅವರು ಇಂದು ರಾತ್ರಿ ಆಸ್ಪತ್ರೆಯಲ್ಲೇ ಉಳಿಯಲಿದ್ದಾರೆ. ಅವರ ರಕ್ತದ ಪರೀಕ್ಷೆಗಾಗಿ ರಕ್ತದ ಮಾದರಿಯನ್ನು ಜಯದೇವ ಆಸ್ಪತ್ರೆ ವೈದ್ಯರು ಪಡೆದಿದ್ದಾರೆ. ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ದಿನೇಶ್ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗಿದೆ.

ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಎ5 ಆರೋಪಿ ಬೈರತಿ ಬಸವರಾಜ್ ಗೆ ಚಿಕಿತ್ಸೆ ಕೊಡಿಸಲು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಸೂಚನೆ ನೀಡಿತ್ತು. ಶಾಸಕ ಬೈರತಿ ಬಸವರಾಜ್ ಗೆ ಆರೋಗ್ಯ ಸಮಸ್ಯೆ ಹಿನ್ನೆಲೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಸೂಚನೆ ನೀಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ವೇಳೆ ಸಮಸ್ಯೆ ಬಗ್ಗೆ ಉಲ್ಲೇಖಿಸಲಾಗಿದೆ. ಹೃದಯ ಸಂಬಂಧಿ ಸಮಸ್ಯೆ ಬಗ್ಗೆ ವೈದ್ಯರು ಉಲ್ಲೇಖಿಸಿದ ಹಿನ್ನೆಲೆಯಲ್ಲಿ ಒಮ್ಮೆ ಜಯದೇವ ಆಸ್ಪತ್ರೆಯಲ್ಲಿ ಟೆಸ್ಟ್ ಮಾಡಿಸಲು ನ್ಯಾಯಾಲಯ ಸೂಚನೆ ನೀಡಿತ್ತು.

ಸದ್ಯ ಸಿಐಡಿ ವಶದಲ್ಲಿಯೇ ಮೆಡಿಕಲ್ ಟೆಸ್ಟ್ ಮಾಡಿಸಲು ಸೂಚನೆ ನೀಡಲಾಗಿತ್ತು. ತಪಾಸಣೆಯ ನಂತರ ಮೆಡಿಕಲ್ ಟೆಸ್ಟ್ ರಿಪೋರ್ಟ್ ಸಮೇತ ನಾಳೆ ಜಡ್ಜ್ ನಿವಾಸದಲ್ಲಿ ಹಾಜರುಪಡಿಸುವಂತೆ ತನಿಖಾಧಿಕಾರಿ ಸಿಐಡಿ ಡಿವೈಎಸ್ಪಿ ಗೌತಮ್ ಅವರಿಗೆ ನ್ಯಾಯಾಧೀಶರು ಸೂಚಿಸಿದ್ದಾರೆ.

ಬೈರತಿ ಬಸವರಾಜ್ ಅವರು ಜೈಲಿಗೋ, ಸಿಐಡಿ ಕಸ್ಟಡಿಗೋ ಎನ್ನುವುದು ನಾಳೆ ನಿರ್ಧಾರವಾಗಲಿದೆ. ಮೆಡಿಕಲ್ ಟೆಸ್ಟ್ ರಿಪೋರ್ಟ್ ಆಧಾರದಲ್ಲಿ ನ್ಯಾಯಾಧೀಶರು ನಾಳೆ ನಿರ್ಧರಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular