ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ರಾಜ್ ಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.
ಬಂಧನವಾದರೆ ತಕ್ಷಣ ಬಿಡುಗಡೆಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ತನಿಖೆಗೆ ಸಹಕರಿಸಲು ಬೈರತಿ ಬಸವರಾಜ್ ಗೆ ಸೂಚನೆ ನೀಡಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜನವರಿ 6ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ಜಿ. ಬಸವರಾಜ್ ಅವರ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್‌ಪಿಪಿಗೆ ಹೈಕೋರ್ಟ್ ಸೂಚನೆ ನೀಡಿದೆ. ನೋಟಿಸ್ ನೀಡಿದಾಗ ಬೈರತಿ ಬಸವರಾಜ್ ತನಿಖೆಗೆ ಹಾಜರಾಗಿದ್ದಾರೆ. ಆದರೆ ಅವರ ವಿರುದ್ಧ ಇನ್ನೂ ಆರೋಪ ಪಟ್ಟಿ ಸಲ್ಲಿಸಿಲ್ಲ. ಆರೋಪ ಪಟ್ಟಿ ಸಲ್ಲಿಸದಿರುವ ಬಗ್ಗೆ ತನಿಖಾಧಿಕಾರಿ ಸಮಂಜಸ ಕಾರಣ ನೀಡಿಲ್ಲ. ಜುಲೈ 18 ರಿಂದ ಡಿಸೆಂಬರ್ 19 ರವರೆಗೆ ಬಂಧನದಿಂದ ರಕ್ಷಣೆ ಇತ್ತು ಎಂದು ನ್ಯಾಯಮೂರ್ತಿ ಜಿ. ಬಸವರಾಜ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.

