BREAKING : ಶಾಸಕ ಹೆಚ್.ಡಿ. ರೇವಣ್ಣಗೆ ಬಿಗ್ ಶಾಕ್ : ಸಮನ್ಸ್ ಜಾರಿ ಮಾಡುವಂತೆ ಮತ್ತೆ ಹೈಕೋರ್ಟ್ ಆದೇಶ

ಬೆಂಗಳೂರು: ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಎಚ್.ಡಿ. ರೇವಣ್ಣ ಅವರು ಅಕ್ರಮಗಳನ್ನು ನಡೆಸುವ ಮೂಲಕ ಆಯ್ಕೆಯಾಗಿದ್ದಾರೆ. ಆದ್ದರಿಂದ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಚುನಾವಣಾ ತಕರಾರು ಅರ್ಜಿಗೆ ಸಂಬಂಧಿಸಿ ರೇವಣ್ಣ ಅವರಿಗೆ ಸಮನ್ಸ್ ಜಾರಿಗೊಳಿಸಲು ಹೈಕೋರ್ಟ್ ಮತ್ತೊಮ್ಮೆ ಆದೇಶಿಸಿದೆ.

ಶಾಸಕ ಹೆಚ್. ಡಿ ರೇವಣ್ಣ ಆಯ್ಕೆ ಅಸಿಂಧು ಕೋರಿ ವಕೀಲ ಜಿ.ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಹೈಕೋರ್ಟ್, ಮತ್ತೆ ಸಮನ್ಸ್ ಜಾರಿಗೆ ಆದೇಶಿಸಿದೆ.

ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಶಾಸಕ ಎಚ್ ಡಿ ರೇವಣ್ಣಗೆ ಸಮನ್ಸ್ ಜಾರಿಯಾಗದ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟಣೆ ಮೂಲಕ ಸಮನ್ಸ್ ಜಾರಿಗೆ ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಅವರು ಮನವಿ ಮಾಡಿದ್ದಾರೆ.

ರೇವಣ್ಣ ಅವರ ಬೆಂಬಲಿಗರು ಮತದಾರರಿಗೆ ಹಣ ಹಂಚುವ ಮೂಲಕ ಮತದರಾರನ್ನು ಓಲೈಸಿದ್ದಾರೆ ಎಂಬ ಆರೋಪವೂ ಸೇರಿದಂತೆ ವಿವಿಧ ಅಕ್ರಮ ನಡೆಸಿ ಗೆದ್ದಿರುವ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು  ಎಂದು ಜಿ.ದೇವರಾಜೇಗೌಡ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read