HomeKarnatakaBREAKING : ಶಾಸಕ ಮುನಿರತ್ನಗೆ ಮತ್ತೆ ಜೈಲೇ ಗತಿ ; ಅ.5 ರವರೆಗೆ ನ್ಯಾಯಾಂಗ ಬಂಧನ..!

BREAKING : ಶಾಸಕ ಮುನಿರತ್ನಗೆ ಮತ್ತೆ ಜೈಲೇ ಗತಿ ; ಅ.5 ರವರೆಗೆ ನ್ಯಾಯಾಂಗ ಬಂಧನ..!

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನಗೆ ಮತ್ತೆ ಜೈಲೇ ಗತಿ ಆಗಿದ್ದು, ಅ.5 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.

ಜಾತಿ ನಿಂದನೆ ಪ್ರಕರಣದಲ್ಲಿ ಬೇಲ್ ಸಿಕ್ಕರೂ ಮುನಿರತ್ನಗೆ ಸಂಕಷ್ಟ ಎದುರಾಗಿದ್ದು, ಅತ್ಯಾಚಾರ ಪ್ರಕರಣದಲ್ಲಿ ಅ.5 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.
ನಾನು ಬೇಕಾದರೆ ರಾಜೀನಾಮೆ ಕೊಡುತ್ತೇನೆ, ನನಗೆ ಇಂತಹ ಹಿಂಸೆ ಸಹಿಸೋಕೆ ಆಗಲ್ಲ. ನನ್ನ ಮೇಲೆ ಸಂಚು ರೂಪಿಸಿ ಜೈಲಿಗೆ ಕಳುಹಿಸಿದ್ದಾರೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

ಕಗ್ಗಲಿಪುರ ಠಾಣೆಗೆ ಬಂದ ಮಹಿಳೆ ದೂರು ನೀಡಿದ್ದು, 2020 – 22 ರವರೆಗೆ ತನ್ನ ಮೇಲೆ ಅತ್ಯಾಚಾರ ಎಸಗಿದ ಬಗ್ಗೆ ದೂರು ಕೊಟ್ಟಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ದೂರು ಪರಿಶೀಲನೆ ನಡೆಸಿದ ಕಗ್ಗಲಿಪುರ ಠಾಣೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಿಚಿತ ಮುನಿರತ್ನ ಸ್ಥಳವೊಂದಕ್ಕೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದರು. ವಿಡಿಯೋ ಮಾಡಿಟ್ಟುಕೊಂಡು ಅನೇಕ ಬಾರಿ ಅತ್ಯಾಚಾರ ಎಸಗಿದ್ದಾರೆ. ನಾನು ಹೇಳಿದಂತೆ ಕೇಳದಿದ್ದರೆ ಪತಿ, ಮಕ್ಕಳಿಗೆ ವಿಡಿಯೋ ತೋರಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಮತ್ತೊಬ್ಬ ಮಹಿಳೆ ಜೊತೆ ಸೇರಿ ಆತ ಹೇಳಿದವರನ್ನು ಹನಿ ಟ್ರ್ಯಾಪ್ ಮಾಡಿಸಿದ್ದಾರೆ. ಜೀವ ಬೆದರಿಕೆ, ಮರ್ಯಾದೆಗೆ ಅಂಜಿ ಆತ ಹೇಳಿದಂತೆ ಕೇಳಿರುವುದಾಗಿ ಮಹಿಳೆ ದೂರು ನೀಡಿದ್ದಾರೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular