HomeLatest NewsBREAKING : ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ, ಕೂಡಲೇ ರಾಜೀನಾಮೆ ನೀಡಬೇಕು :...

BREAKING : ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ, ಕೂಡಲೇ ರಾಜೀನಾಮೆ ನೀಡಬೇಕು : CM ಸಿದ್ದರಾಮಯ್ಯ ಆಗ್ರಹ

ಬೆಂಗಳೂರು :  ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ, ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ನಡೆದ ಮತಗಳ್ಳತನ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್‌ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು. ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧ ಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶಾದ್ಯಂತ ವ್ಯಾಪಿಸಲಿದೆ. ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ ಮಾಡಿ, ಮತದಾನದ ಅಂಕಿ ಅಂಶಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡಿ ದಾಖಲೆಗಳ ಸಮೇತ ದೇಶದ ಜನರ ಮುಂದೆ ಇಟ್ಟಿದ್ದಾರೆ. ಚುನಾವಣಾ ಆಯೋಗ ಸಂವಿಧಾನದ ಅಡಿಯಲ್ಲಿ ನ್ಯಾಯಬದ್ದವಾಗಿ ನಡೆದುಕೊಳ್ಳಬೇಕು. ಸಂವಿಧಾನ ಕೊಟ್ಟಿರುವ ಮತದಾನದ ಮೂಲಭೂತ ಹಕ್ಕನ್ನು ಯಾರೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಅದಕ್ಕೆ ದೇಶದ ಜನತೆ ಅವಕಾಶ ಕೊಡುವುದಿಲ್ಲ. ಮನುವಾದಿಗಳು ಸಂವಿಧಾನ ವಿರೋಧಿಗಳು. ಇವರು ಸಂವಿಧಾನದ ಪ್ರಕ್ರಿಯೆಯನ್ನೇ ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ವಂಚನೆ ಕಾರಣದಿಂದ ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತಿದೆಯೇ ಹೊರತು ಜನಾಭಿಪ್ರಾಯ ಕಾಂಗ್ರೆಸ್ ಪರವಾಗಿಯೇ ಇತ್ತು ಎನ್ನುವುದು ಈಗ ಗೊತ್ತಾಗಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 14 ಸೀಟುಗಳನ್ನು ಗೆಲ್ಲಬೇಕಿತ್ತು. ಆದರೆ ಮತಗಳ್ಳತನದ ಕಾರಣದಿಂದ ನಾವು ಸೋತಿದ್ದೇವೆ. ಇವಿಎಂ ಬಂದ ಮೇಲೆ ಇವನ್ನು ದುರುಪಯೋಗ ಮಾಡಿಕೊಳ್ಳುವ ಕೆಲಸ ಆಗುತ್ತಿರುವುದು ಈಗ ದಾಖಲೆ ಸಮೇತ ಸಿಕ್ಕಿಬಿದ್ದಿದ್ದಾರೆ. ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ. ಇದಕ್ಕೆ ಇಡೀ ರಾಜ್ಯದ ಜನತೆ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂದರು  .

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular